ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸರ್ಕಾರಿ ನೌಕರರ ಮಕ್ಕಳಿಗೆ ಸರ್ಕಾರಿ ನೌಕರರ ಸಂಘದಿAದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ. ಮೇ:-19 (BPN ಸುದ್ದಿ) ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ. ಶೇ.90 ಕಿಂತ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮೇ 31ರ ಒಳಗೆ
https://biಣ.ಟಥಿ/ಞsgeಚಿಠಿಠಿ2023 ಲಿಂಕ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ. ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದÀ ಚಾಮರಾಜನಗರ ಜಿಲ್ಲಾಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ತಂದೆ ಅಥವಾ ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಕಾಯಂ ನೌಕರರರಾಗಿರಬೇಕು.
ನಿಗಮ ಮಂಡಳಿ, ಪ್ರಾಧಿಕಾರ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕ ಗೊಂಡ ನೌಕರ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ. ವಿದ್ಯಾರ್ಥಿಗಳು 2023ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ಅನ್‌ಲೈನ್ ಅರ್ಜಿ ಸಲ್ಲಿಸುವಾಗ ದೃಢೀಕೃತ ಅಂಕಪಟ್ಟಿ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಅಪ್‌ಲೋಡ್ ಮಾಡಬೇಕು. ಸಂಘದ ತಾಲ್ಲೂಕು, ಜಿಲ್ಲಾ ಯೋಜನಾ ಶಾಖೆ ಅಧ್ಯಕ್ಷರು, ದೃಢೀಕರಣ ಮಾಡಿಸಬೇಕು ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ಸಂಘದ ಕಚೇರಿಯಲ್ಲಿ ಪಡೆಯಬಹುದಾಗಿದೆ. ಎಂದು ಹೇಳಿದರು.