---Advertisement---

Advertisement

ರಾಜ್ಯ ಚುನಾವಣಾ ಆಯೋಗದ ಅನುಮತಿ ಪಡೆದು ಶಿಕ್ಷಕರ ವರ್ಗಾವಣೆಗೆ ಪ್ರಕ್ರಿಯೆ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳ ಭರವಸೆ.

 

ಧೀರ್ಘಾವಧಿಯಿಂದ ನೆನೆಗುದಿಯಲ್ಲಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿಯವರು ಹಾಗೂ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಸಿದ್ಧಬಸಪ್ಪ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಶಿಕ್ಷಕರು ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪನವರ ಸಮ್ಮುಖದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿರವರನ್ನು ಭೇಟಿ ಮಾಡಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚರ್ಚಿಸಲಾಯಿತು.

 

ವರ್ಗಾವಣೆಗಾಗಿ ಈಗಾಗಲೇ 79 ಸಾವಿರಕ್ಕು ಹೆಚ್ಚು ಶಿಕ್ಷಕರು ಅರ್ಜಿ ಸಲ್ಲಿಸಿರುತ್ತಾರೆ.

 

ಹೆಚ್ಚುವರಿ ಶಿಕ್ಷಕರ ವರ್ಗಾವಣೆಯನ್ನು ಆಯಾ ತಾಲ್ಲೂಕಿನ ಒಳಗಡ ವರ್ಗಾವಣೆ ಮಾಡುವುದು. • ದೀರ್ಘಕಾಲದಿಂದ ನೆನೆಗುದಿಯಲ್ಲಿರುವ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯನ್ನು ಶೀಘ್ರವಾಗಿ ಕೈಗೊಳ್ಳುವಂತೆ ಮನವಿ ಮಾಡಲಾಯಿತು. .

 

ಶಿಕ್ಷಕರ ಸಮಸ್ಯೆ ಹಾಗೂ ಸಂಘದ ಮನವಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು; ಈಗಾಗಲೇ ಯಾವುದೇ ವರ್ಗಾವಣೆಗಳನ್ನು ಮಾಡಬೇಕಾಗಿದ್ದಲ್ಲಿ ರಾಜ್ಯ ಚುನಾವಣಾ ಆಯೋಗದ ಅನುಮತಿಯನ್ನು ಪಡೆಯುವಂತೆ ಸುತ್ತೋಲೆಯನ್ನು ಹೊರಡಿಸಿರುವುದರಿಂದ ರಾಜ್ಯ ಚುನಾವಣಾ ಆಯೋಗದ ಅನುಮತಿಯನ್ನು ಪಡೆದುಕೊಂಡು ನಾಳೆ ಶಿಕ್ಷಕರ ವರ್ಗಾವಣೆ ಕಡತಕ್ಕೆ ಅನುಮೋದನೆ ನೀಡಿ

 

ವರ್ಗಾವಣೆ ಪ್ರಕ್ರಿಯೆಗಳನ್ನು ಆರಂಭಿಸಲು ನಿರ್ದೇಶನ ನೀಡುವ ಸ್ಪಷ್ಟ ಭರವಸೆ ನೀಡಿರುತ್ತಾರೆ. ಮಾನ್ಯ ಮುಖ್ಯಮಂತ್ರಿಗಳ ಈ ಬರವಸೆ ವರ್ಗಾವಣೆ ನಿರೀಕ್ಷಣೆಯಲ್ಲಿದ್ದ ಶಿಕ್ಷಕರಲ್ಲಿ ಸಂತಸವನ್ನು ಮೂಡಿಸಿದೆ.

BPN ಸುದ್ಧಿ.

By BPN

Leave a Reply

Your email address will not be published. Required fields are marked *