ಆಯಾ ಶಾಲೆಗಳಲ್ಲೇ ಮೌಲ್ಯಾಂಕನ ಪರೀಕ್ಷೆ.
ಬೆಂಗಳೂರು: ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ
ನಡೆಸುತ್ತಿರುವ ಮೌಲ್ಯಾಂಕನ ಪರೀಕ್ಷೆಗೆ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರಗಳಾಗಿ ಪರಿಗಣಿಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. 2022-23ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಬೋಧನೆ ಮಾಡುತ್ತಿರುವ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಯಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನನುಕೂಲವಾಗುತ್ತಿರುವ ಬಗ್ಗೆ ಹಲವು ಪಾಲಕರು ದೂರವಾಣಿ ಮೂಲಕ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರಗಳನ್ನಾಗಿ ಪರಿಗಣಿಸಿ ಈಗಾಗಲೆ ನಿಗದಿ ಮಾಡಿರುವ ದಿನಾಂಕಗಳಂದೇ ಮೌಲ್ಯಾಂಕನ
ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.13ರಿಂದ 18ರ ವರೆಗೆ ಮೌಲ್ಯಾಂಕನ ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆಗಳನ್ನು ವಿದ್ಯಾರ್ಥಿಗಳ ಸಂಖ್ಯೆ ಆಧರಿಸಿ ಪರೀಕ್ಷಾ ಕೇಂದ್ರಗಳನ್ನು ರಚಿಸುವಂತೆ
ಸೂಚಿಸಲಾಗಿತ್ತು. ಪರೀಕ್ಷೆ ನಡೆಸುವ ಸಂಬಂಧ ಮಾ.3ರಿಂದಲೇ ಸಹಾಯವಾಣಿ ಆರಂಭಿಸಲಾಗಿದ್ದು, ವಿದ್ಯಾರ್ಥಿಗಳು ಪ್ರಸ್ತುತ
ನಡೆಸಬೇಕು. ಉಳಿದಂತೆ ಮಾರ್ಗಸೂಚಿ ಅನ್ವಯ ಗೌಪ್ಯತೆ ಮತ್ತು ಪಾವಿತ್ರ್ಯತೆ ಕಾಪಾಡಲು ಕರ್ನಾಟಕ ಶಾಲಾ ಗುಣಮಟ್ಟ ಮತ್ತು ಅಂಗೀಕರಣ ಪರಿಷತ್ತು ತಿಳಿಸಿದೆ.
BPN EDUCATION NEWS.