---Advertisement---

Advertisement

ಬೆಳಗಾವಿ, ಫೆ, 10: ಮನೆ ಕಳ್ಳತನ ಮಾಡುತ್ತಿದ್ದ ಖದೀಮನೋರ್ವನನ್ನು ಬಂಧಿಸಿರುವ ಜಿಲ್ಲೆಯ ಗೋಕಾಕ ಪಟ್ಟಣದ ಪೊಲೀಸರು ಬಂಧಿತ ಆರೋಪಿಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರ ಹಾಗೂ ಮೊಬೈಲ್ ಸೇರಿ ಕೆಲವು ಸಾಮಗ್ರಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇತ್ತಿಚೆಗೆ ಗೋಕಾಕ್ ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆದಿದ್ದವು. ಇದಕ್ಕೆ ಸಂಬಂಧಿಸಿದಂತೆ ಗೋಕಾಕ್ ಶಹರ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು.

ಈ ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಗೋಕಾಕ ಪೊಲೀಸರು ಆರೋಪಿ ಓರ್ವನನ್ನು ಬಂಧಿಸಿದ್ದು, ಆತನಿಂದ 14.5 ಗ್ರಾಂ ಬಂಗಾರ, 250 ಗ್ರಾಂ ಬೆಳ್ಳಿಯ ಆಭರಣಗಳು ಮತ್ತು 2 ಮೊಬೈಲಗಳು ಸೇರಿ 1.02 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಗೋಕಾಕ ಪೊಲೀಸರ ಈ ಕಾರ್ಯಕ್ಕೆ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಹಾಗೂ ಹೆಚ್ಚುವರಿ ಎಸ್ ಪಿ ವೇಣುಗೋಪಾಲ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

By BPN

Leave a Reply

Your email address will not be published. Required fields are marked *