ಮಂಡ್ಯದ ಗುಣಸಾಗರಿ ನಾಗರಾಜ್ ಹಾಗೂ ಚಿಕ್ಕಮಗಳೂರಿನ ಡಿ.ಎನ್. ಗೀತಾ ಅವರು ಕನ್ನಡ ಸಾಹಿತ್ಯ ಪರಿಷತ್ತು ನೀಡುವ ʻಮನೋಹರಿ ಪಾರ್ಥಸಾರಥಿ ಮನುಶ್ರೀ ದತ್ತಿ ಪ್ರಶಸ್ತಿಗೆʼ ಆಯ್ಕೆ
ಬೆಂಗಳೂರು: ದೇಶದ ವಿವಿಧ ಭಾಷೆಗಳಲ್ಲಿ ಸಮಗ್ರ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದ ಕನ್ನಡಿಗ ಸಾಹಿತಿಗಳಿಗೆ ಕೊಡಮಾಡುವ ೨೦೨೨ ಹಾಗೂ ೨೦೨೩ನೇ ಸಾಲಿನ ʻಮನೋಹರಿ ಪಾರ್ಥಸಾರಥಿ ಮನುಶ್ರೀ ದತ್ತಿ ಪ್ರಶಸ್ತಿʼಯನ್ನು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿದೆ. ಪ್ರಶಸ್ತಿಯು ೧೦,೦೦೦(ಹತ್ತು ಸಾವಿರ)ರೂ. ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಅತ್ತಿಮಬ್ಬೆ ಪ್ರತಿಷ್ಠಾನ ಟ್ರಸ್ಟ್(ರಿ) ನವರು ಈ ದತ್ತಿ ನಿಧಿಯನ್ನು ಕನ್ನಡಿಗರ ಸಾರ್ವಭೌಮ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ʻ*೨೦೨೨ನೆಯ ಸಾಲಿನ ʻಮನೋಹರಿ ಪಾರ್ಥಸಾರಥಿ ಮನುಶ್ರೀ ದತ್ತಿ ಪ್ರಶಸ್ತಿʼಯನ್ನು ಮಂಡ್ಯದ ಶ್ರೀಮತಿ ಗುಣಸಾಗರಿ ನಾಗರಾಜ್ ಹಾಗೂ ೨೦೨೩ನೆಯ ಸಾಲಿನ ಪುರಸ್ಕಾರಕ್ಕೆ ಚಿಕ್ಕಮಗಳೂರಿನ ಶ್ರೀಮತಿ ಡಿ.ಎನ್.ಗೀತಾ* ಅವರನ್ನು ಆಯ್ಕೆ ಸಮಿತಿ ಆಯ್ಕೆಮಾಡಿರುತ್ತದೆ. ಕನ್ನಡ ಸಾಹಿತ್ಯ ಪರಿಷತ್ತು ʻ*ಮನೋಹರಿ ಪಾರ್ಥಸಾರಥಿ ಮನುಶ್ರೀ ದತ್ತಿ* ಪ್ರಶಸ್ತಿಯುನ್ನು ಕಳೆದ ೧೩ ವರ್ಷಗಳಿಂದ ನಿರಂತರವಾಗಿ ಕನ್ನಡ ಸಾಹಿತ್ಯ ಪರಿಷತ್ತು ಈ ಪ್ರಶಸ್ತಿಯನ್ನು ನೀಡುತ್ತ ಬಂದಿರುತ್ತದೆ. ದಾನಿಗಳ ಮೂಲ ಉದ್ದೇಶದಂತೆ ದೇಶದ ವಿವಿಧ ಭಾಷೆಗಳಲ್ಲಿ ಸಮಗ್ರ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದ ಕನ್ನಡಿಗ ಸಾಹಿತಿಯೊಬ್ಬರನ್ನು ಗುರುತಿಸಿ ಈ ದತ್ತಿ ಪ್ರಶಸ್ತಿ ನೀಡುತ್ತ ಬರಲಾಗಿದೆ. ಇದುವರೆಗೆ ರಾಜ್ಯದ ೧೩ ಹಿರಿಯ ಸಾಹಿತಿಗಳಿಗೆ ʻ*ಮನೋಹರಿ ಪಾರ್ಥಸಾರಥಿ ಮನುಶ್ರೀ ದತ್ತಿ ಪ್ರಶಸ್ತಿ’ಯನ್ನು ಪ್ರದಾನ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ*.
ವಿವಿಧ ಭಾಷೆಗಳ ಸಾಹಿತ್ಯದಲ್ಲಿ ಸಾಧನೆ ಮಾಡುತ್ತಿರುವ ಪ್ರತಿಭಾನ್ವಿತ ಕನ್ನಡದ ಸಾಹಿತಿಗಳ ಸಮಗ್ರ ಸಾಹಿತ್ಯದ ಕೊಡುಗೆಗಳನ್ನು ಗಮನದಲ್ಲಿ ಇಟ್ಟುಕೊಂಡು ಸಾಹಿತ್ಯ ಕ್ಷೇತ್ರದ ಅತೀ ಮಹತ್ವವಾದ ʻ*ಮನೋಹರಿ ಪಾರ್ಥಸಾರಥಿ ಮನುಶ್ರೀ ದತ್ತಿ* ಪುರಸ್ಕಾರವಾಗಿರುತ್ತದೆ. ವಿವಿಧ ಭಾಷೆಯಗಳಲ್ಲಿ ಪುಸ್ತಕಗಳನ್ನು ಸಮಾಜಕ್ಕೆ ನೀಡಿರುವ ಕನ್ನಡದ ಸಾಹಿತಿಗಳಿಗೆ ಪರಿಷತ್ತು ಪ್ರಶಸ್ತಿ ಪ್ರದಾನ ಮಾಡುತ್ತ ಬಂದಿದೆ. ಈ ಬಾರಿ ಆಯ್ಕೆ ಯಾಗಿರುವ ಮಂಡ್ಯದ ಶ್ರೀಮತಿ ಗುಣಸಾಗರಿ ನಾಗರಾಜ್ ಹಾಗೂ ಚಿಕ್ಕಮಗಳೂರಿನ ಶ್ರೀಮತಿ ಡಿ.ಎನ್.ಗೀತಾ ಅವರಿಗೆ ಸಮಸ್ತ ಕನ್ನಡಿಗರ ಪರವಾಗಿ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸುತ್ತದೆ ಎಂದು ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ, ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ದತ್ತಿ ದಾನಿಗಳ ಪರವಾಗಿ ಶ್ರೀಮತಿ ವರದಾ ಶ್ರೀನಿವಾಸ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ನೇ.ಭ. ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ. ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.
ಶ್ರೀಮತಿ ಗುಣಸಾಗರಿ ನಾಗರಾಜ್
ಶ್ರೀಮತಿ ಡಿ.ಎನ್.ಗೀತಾ