ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ೩ ಕೋಟಿ ರೂ. ಅನುದಾನ: ಸಿ.ಎಂ ಬೊಮ್ಮಾಯಿ ಅವರಿಗೆ ಸಮಸ್ತ ಕನ್ನಡಿಗರ ಪರವಾಗಿ ಅಭಿನಂದನೆಗಳು
ನಾಡೋಜ ಡಾ. ಮಹೇಶ ಜೋಶಿ
ಬೆಂಗಳೂರು: ʻಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕಾಗಿ ಸರಕಾರ ೩ (ಮೂರು ಕೋಟಿ) ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಕನ್ನಡಿರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರನ್ನು ಸಮಸ್ತ ಕನ್ನಡಿಗರ ಪರವಾಗಿ ಕನ್ನಡ ಸಾಹಿತ್ಯ ಪರಿಷತ್ತು ಗೌರವದಿಂದ ಅಭಿನಂದಿಸುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ *ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ* ಅವರು, ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ೩ ಕೋಟಿ ರೂ ಅನುದಾನ ಸರ್ಕಾರ ನೀಡಬೇಕು, ಎನ್ನುವ ಬೇಡಿಕೆಯನ್ನು ಸಿಎಂ ಅವರ ಬಳಿ ಕನ್ನಡ ಸಾಹಿತ್ಯ ಪರಿಷತ್ತು ಮಂಡಿಸಿತ್ತು.
ಪರಿಷತ್ತಿನ ಬೇಡಿಕೆಗೆ ತಕ್ಷಣದಲ್ಲಿ ಸ್ಪಂದಿಸಿ, ಹಾವೇರಿಯಲ್ಲಿ ನಡೆದ ೮೬ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ *ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ* ಅವರು ತಮ್ಮ ಭಾಷಣದಲ್ಲಿ ʻ*ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಭವನ*ʼ *ನಿರ್ಮಾಣಕ್ಕೆ ಸರಕಾರದಿಂದ ೩ ಕೋಟಿ ರೂ ಅನುದಾನ*ʼ ಕೊಡುವ ವಾಗ್ಧಾನವನ್ನು ನೀಡಿದ್ದರುಎಂದ ನಾಡೋಜ ಡಾ. ಮಹೇಶ ಜೋಶಿ ನೆನಪಿಸಿಕೊಂಡಿದ್ದಾರೆ.
ಸದ್ಯ ಕೊಟ್ಟ ಮಾತಿನಂತೆ ಹಾವೇರಿಯಲ್ಲಿ ನಿಮಾರ್ಣಮಾಡಲಾಗುವ ಕನ್ನಡ ಸಾಹಿತ್ಯ ಭವನಕ್ಕೆ ೩ ಕೋಟಿ ರೂ. ಸರಕಾರದಿಂದ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ. ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ʻ*ಕನ್ನಡ ಸಾಹಿತ್ಯ ಭವನ*ʼ ನಿರ್ಮಾಣಮಾಡಲು ಈಗಾಗಲೇ ಪರಿಷತ್ತು ಜಾಗ ನೊಂದಣಿ ಮಾಡಿಕೊಂಡಿದ್ದು, ಸದ್ಯದಲ್ಲಿಯೇ ಕಟ್ಟಡ ನಿರ್ಮಾಣದ ಕಾಮಗಾರಿ ಆರಂಭಿಸಲಾಗುವುದು ಎಂದು *ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ* ಪ್ರಕಟಣೆಯಲ್ಲಿ ತಿಳಸಿದ್ದಾರೆ.
ಹಾವೇರಿ ಸಮ್ಮೇಳನದಲ್ಲಿ ʻ*ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ -೨೦೨೨*ʼನ್ನು ಕಾನೂನು ಮಾಡಬೇಕು ಎನ್ನುವ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ʻ*ಕನ್ನಡ ಬಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨*ʼನ್ನು ಸದನದಲ್ಲಿ ಮಂಡಿಸಿ ಕಾನೂನು ಮಾಡುವ ಭರವಸೆ ನೀಡಿದ್ದರು. ಅವರು ನೀಡಿದ್ದ ಭರವಸೆಯಂತೆ ʻ*ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-೨೦೨೨*ʼ ನ್ನು ಕಾನೂನು ಮಾಡಿ ನಾಡಿನಲ್ಲಿ ಕನ್ನಡ ಅನುಷ್ಠಾನಕ್ಕೆ ಮುಂದಾಗಿದ್ದಾರೆ.
ಈ ಕಾನೂನಿನ ಮೂಲಕ ಕನ್ನಡವನ್ನು ಸಮಗ್ರವಾಗಿ ಜಾರಿ ಮಾಡುವುದರ ಜೊತೆ ಕನ್ನಡಿಗರ ಬಹು ದಿನದ ಕನಸಾಗಿರುವ ಕನ್ನಡವನ್ನು ಅನ್ನದ ಭಾಷೆಯಾಗಿ ಮಾಡಲು ಅನುಕೂಲವಾಗಲಿದೆ ಎಂದು *ನಾಡೋಜ ಡಾ. ಮಹೇಶ ಜೋಶಿ* ತಿಳಿಸಿದ್ದಾರೆ.
ಅದೇ ರೀತಿ ಹಾವೇರಿಯ ನಡೆದ ೮೬ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ʻ*ಮೂರನೆಯ ವಿಶ್ವಕನ್ನಡ ಸಮ್ಮೇಳನ*ʼ ವನ್ನು ದಾವಣಗೆರೆಯಲ್ಲಿ ಆಯೋಜಿಸುವ ಪ್ರಸ್ತಾಪವನ್ನು ಮಾಡಿದ್ದರು.
ಅವರು ಹೇಳಿದ ಮಾತಿನಂತೆ ಈ ಬಾರಿಯ ಆಯವ್ಯದಲ್ಲಿ ದಾವಣಗೆರೆಯಲ್ಲಿ *ʻಮೂರನೆಯ ವಿಶ್ವ ಕನ್ನಡ ಸಮ್ಮೇಳನ*ʼವನ್ನು ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಸೇರಿ ಸರ್ಕಾರ ನಡೆಸಲು ಅಧಿಕೃತ ಘೊಷಣೆ ಮಾಡಿರುವುದು ಮುಖ್ಯಮಂತ್ರಿಗಳಿಗೆ ಕನ್ನಡ ಭಾಷೆಯ ಮೇಲಿರುವ ಅಭಿಮಾನ ಹಾಗೂ ಕೊಟ್ಟ ಮಾತನ್ನು ನಡೆಸಿಕೊಡುವ ಛಲಗಾರಿಕೆ ಎತ್ತಿ ತೋರಿಸುತ್ತದೆ ಎಂದಿದ್ದಾರೆ.
ಕೊಟ್ಟ ಮಾತನ್ನು ಉಳಿಸಿಕೊಂಡಿರುವ *ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ* ಅವರಿಗೆ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಕನ್ನಡದ ಅಸ್ಮಿತೆಯ ಎಲ್ಲ ಸಂಘ ಸಂಸ್ಥೆಗಳ ಮಾತ್ರ ಸಂಸ್ಥೆಯಾಗಿರುವ *ಕನ್ನಡ ಸಾಹಿತ್ಯ ಪರಿಷತ್ತು ಗೌರವ ಪೂರ್ವಕ ಅಭಿನಂದಿಸುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ. ಡಾ. ಮಹೇಶ ಜೋಶಿ* ಪ್ರಕಟಣೆಯಲ್ಲಿ ತಿಳಿಸಿದ್ದಾರೆ.