---Advertisement---

Advertisement

ಬೆಳಗಾವಿ ನಗರದಲ್ಲಿ ಜೂ.9ರಿಂದ ಮೂರು ದಿನಗಳ ಕಾಲ ಅಂತಾರಾಷ್ಟ್ರೀಯ ಪತ್ರಕರ್ತರ ಸಮ್ಮೇಳನ ಆಯೋಜಿಸಲಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ದಿಲೀಪ ಕುರ೦ದವಾಡೆ ಹೇಳಿದರು.

ನಗರದಲ್ಲಿ ಶನಿವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿ, ಕಾರ್ಯಕ್ರಮಕ್ಕೆ ರಾಜ್ಯ ಸಂಘದ ಎಲ್ಲ ಪದಾಧಿಕಾರಿಗಳಿಗೆ ಹಾಗೂ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯರಿಗೆ ವಿಶೇಷ ಆಹ್ವಾನವಿರುತ್ತದೆ. ಕಾರ್ಯಕ್ರಮದ ರೂಪುರೇಷೆ ಕುರಿತು ಮುಂದಿನ ದಿನಗಳಲ್ಲಿ ಸೂಕ್ತ ಮಾಹಿತಿ ನೀಡಲಾಗುವುದು ಎ೦ದು ಹೇಳಿದರು.

ಅಂತಾರಾಷ್ಟ್ರೀಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶ್ರೀಲಂಕಾ ಕ್ರಿಕೆಟಿಗ ಸನತ್ ಜಯಸೂರ್ಯ, ಪಬ್ಲಿಕ್ ಟಿವಿ ಸಂಪಾದಕ ಎಚ್‌. ಆರ್.ರಂಗನಾಥ, ಎರರ್‌ಎಲ್‌ ಗ್ರೂಪ್ – ವ್ಯವಸ್ಥಾಪಕ ನಿರ್ದೇಶಕ ಆನಂದ ಸಂಕೇಶ್ವರ, ಸ್ಟಾರ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಸ೦ಜಯ್‌ ಘೋಡಾವತ, ಸಂಘದ ಗೌರವಾಧ್ಯಕ್ಷ ಡಾ.ಭೀಮಶಿ ಜಾರಕಿಹೊಳಿ, ಶ್ರೀಲಂಕಾ ಪ್ರವಾಸೋದ್ಯಮ ಕ್ಷೇತ್ರದ ಅಧ್ಯಕ್ಷ ಚಲಕಾಗಜಬಾಹು,

ಅಂತಾರಾಷ್ಟ್ರೀಯ ಪತ್ರಕರ್ತೆಕೋರಿಯಾ ದೇಶದ ಗೀತಿಕಾ ಸೇರಿದಂತೆ ಪತ್ರಿಕಾ ದಿಗ್ಗಜರು, ಉದ್ಯಮಿಗಳು ಹಾಗೂ ದೇಶ ವಿದೇಶದ ಪತ್ರಕರ್ತರು ಭಾಗವಹಿಸಲಿದ್ದಾರೆ. ಎಂದು ಹೇಳಿದರು.

ಈ ಸಮ್ಮೇಳನ ಯಶಸ್ವಿಯಾಗಿ ಜರುಗಿಸಲು ಸಲಹೆ ಸೂಚನೆ ರೂಪುರೇಷೆಗಳ ಕುರಿತು ಜಿಲ್ಲಾ

ಕಾರ್ಯಕಾರಿಣಿ ಸಭೆ ನಡೆಸಿ ಚರ್ಚಿಸಲಾಯಿತು. ಸಂಘದ ರಾಜ್ಯ ಉಪಾಧ್ಯಕ್ಷ ಪುಂಡಲೀಕ ಭೀ.ಬಾಳೋಜಿ, ಪ್ರ.ಕಾರ್ಯದರ್ಶಿ ಅರುಣ ಪಾಟೀಲ, ಜಿಲ್ಲಾ ಉಪಾಧ್ಯಕ್ಷರಾದ ರಾಜಶೇಖರ ಪಾಟೀಲ, ಯಲ್ಲಪ್ಪ ತಳವಾರ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಮಲ್ಲಿಕಾರ್ಜುನರಡ್ಡಿ * ಗೊಂದಿ, ಖಜಾಂಚಿ ಚೇತನ ಹೊಳೆಪ್ಪಗೋಳ, ಮ೦ಜುನಾಥ ಪಾಟೀಲ, ನೌಶಾದ ಬಿಜಾಪರ ಹಾಗೂ ಜಿಲ್ಲಾ ಸಮಿತಿಯ  ಸದಸ್ಯರು ಉಪಸ್ಥಿತರಿದ್ದರು.

By BPN

Leave a Reply

Your email address will not be published. Required fields are marked *