---Advertisement---

Advertisement

ಹಿರಿಯ ಬರಹಗಾರ್ತಿ ಶ್ರೀಮತಿ ವೈದೇಹಿ ಅವರಿಗೆ ನೃಪತುಂಗ ಸಾಹಿತ್ಯ ಪ್ರಶಸ್ತಿ ಪ್ರದಾನ.

ಬೆಂಗಳೂರು: ಮಾರ್ಚ್ 29 ಬುದವಾರ ಬೆಳಗ್ಗೆ: 11-೦೦ ಗಂಟೆಗೆ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿರುವ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಹಯೋಗದಲ್ಲಿ ನೀಡಲಾಗುತ್ತಿರುವ ೨೦೨೨ನೆಯ ಸಾಲಿನ ಪ್ರತಿಷ್ಟಿತ ʻ*ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೃಪತುಂಗ ಸಾಹಿತ್ಯ ಪ್ರಶಸ್ತಿʼ ಹಾಗೂ ʻಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿ*ʼ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಜ್ಞಾನಪೀಠ ಪ್ರಶಸ್ತಿಗೆ ಸರಿಸಮಾನವಾದ ಕನ್ನಡ ನಾಡಿನ ಪ್ರಶಸ್ತಿಯೆಂದು ಪ್ರಖ್ಯಾತವಾದ ʻ*ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೃಪತುಂಗ ಸಾಹಿತ್ಯ ಪ್ರಶಸ್ತಿʼಗೆ* ಈ ಬಾರಿ ಹಿರಿಯ ಬರಹಗಾರ್ತಿ ಉಡುಪಿಯ ಶ್ರೀಮತಿ ವೈದೇಹಿ ಅವರನ್ನು ಈ ಮೌಲಿಕ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ. ೨೦೨೨ನೆಯ ಸಾಲಿನ *ʻಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿʼಗೆ ಗದಗ ಜಿಲ್ಲೆಯ ಗಜೇಂದ್ರಗಡದ ಶ್ರೀ ಹನುಮಂತ ಸೋಮನಕಟ್ಟಿ, ವಿಜಯನಗರ ಜಿಲ್ಲೆಯ ಕೊಟ್ಟೂರಿನ ಶ್ರೀ ಗುಡ್ಡಪ್ಪ ಬೆಟಗೇರಿ, ತುಮಕೂರು ಜಿಲ್ಲೆಯ ಡಾ. ಸತ್ಯಮಂಗಲ ಮಹಾದೇವ, ಗಡಿಭಾಗ ಕಾಸರಗೋಡಿನ ಶ್ರೀಮತಿ ವಿದ್ಯಾರಶ್ಮಿ ಪೆಲ್ಲತಡ್ಕ ಹಾಗೂ ಹಾಸನದ ಶ್ರೀ ಬೇಲೂರು ರಘುನಂದನ* ಅವರನ್ನು ಆಯ್ಕೆಯಾಗಿರುತ್ತಾರೆ.

*ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಧ್ಯಕ್ಷರಾದ ಶ್ರೀ ಎನ್.ಎಸ್. ನಂದೀಶರೆಡ್ಡಿ ಅವರು ಕಾರ್ಯಕ್ರಮ ಉದ್ಘಾಟಣೆ ಮಾಡಲಿದ್ದಾರೆ. ಜ್ಞಾನಪೀಠ ಪುರಸ್ಕೃತರು, ಹಿರಿಯ ಸಾಹಿತಿಗಳಾದ ಡಾ. ಚಂದ್ರಶೇಖರ ಕಂಬಾರ ಅವರು ʻನೃಪತುಂಗ ಹಾಗೂ ಮಯೂರವರ್ಮ ಸಾಹಿತ್ಯ ಪ್ರಶಸ್ತಿʼಗಳನ್ನು ಪ್ರದಾನ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಂ.ಮ.ಸಾ. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಸತ್ಯವತಿ (ಭಾ.ಆ.ಸೇ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಶ್ರೀ ವಿಶ್ವನಾಥ ಪಿ. ಹಿರೇಮಠ (ಕ.ಆ.ಸೇ) ಭಾಗವಹಿಸಲಿದ್ದಾರೆ. ಕ.ರಾ.ರ.ಸಾ.ಸಂ. ಕೇಂದ್ರ ಕ್ರಿಯಾ ಸಮಿತಿಯ ರಾಜ್ಯಾಧ್ಯಕ್ಷರಾದ ಶ್ರೀ ವ.ಚ. ಚನ್ನೇಗೌಡ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಹಿರಿಯ ಕವಯತ್ರಿ ಶ್ರೀಮತಿ ಸವಿತಾ ನಾಗಭೂಷಣ ಅವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.

 

ವಿ.ಸೂ: ಎಲ್ಲರ ಸಮಯಕ್ಕೆ ಗೌರವ ಸಲ್ಲಿಸುತ್ತ ಕಾರ್ಯಕ್ರಮ ನಿಗದಿಯಾದ ಸಮಯಕ್ಕೆ ಸರಿಯಾಗಿ ಆರಂಭಿಸಿ ಸರಿಯಾದ ಸಮಯಕ್ಕೆ ಮುಕ್ತಾಯ ಮಾಡಲಿದ್ದೇವೆ

 

By BPN

Leave a Reply

Your email address will not be published. Required fields are marked *