ಮೂಡಲಗಿ : ವಿಧಾನಸಭಾ ಚುನಾವಣೆ ಹಿನ್ನೆಲೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಾಗಲಕೋಟಿ ಜಿಲ್ಲೆಯ ಮುಧೋಳ ತಾಲೂಕಿನ ಸಮೀರವಾಡಿಯ ಕೆ ಜಿ ಸೊಮೈಯ್ಯ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಮತದಾನ ನನ್ನ ಹಕ್ಕು ಎಂಬ ಶೀರ್ಷಿಕೆಯಡಿ ಬೀದಿ ನಾಟಕದ ರೂಪದಲ್ಲಿ ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವವನ್ನು ಹಾಗೂ ಆಮಿಷಗಳಿಗೆ ಬಲಿಯಾಗದೇ ಯಾರು ಮಾಡುವರೋ ರಾಷ್ಟ್ರದ ಉದ್ಧಾರವ ಅವರಿಗೆ ಹಾಕುವೆವು ನಮ್ಮ ಮತವ ಎಂಬುದನ್ನು ನಾಟಕ ಪ್ರದರ್ಶನ ಮಾಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಪುರಸಭೆಯ ಆರೋಗ್ಯ ನೀರಿಕ್ಷಕ ಚಿದಾನಂದ ಮುಗಳಖೋಡ ಮಾತನಾಡಿ, ವಿದ್ಯಾರ್ಥಿಗಳು ಬೀದಿ ನಾಟಕದ ಮೂಲಕ ಮತದಾನದ ಮಹತ್ವ ಮತ್ತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವುದರೊಂದಿಗೆ ಪಟ್ಟಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನವಾಗಲು ಸಹಕಾರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಕೆ ಜಿ ಸೊಮೈಯ್ಯ ಆಂಗ್ಲ ಮಾಧ್ಯಮ ಶಾಲಾ ಮುಖ್ಯಶಿಕ್ಷಕ ಅನೀಲಕುಮಾರ ಸಿ, ಶಿಕ್ಷಕರಾದ ವಾಸು ದತ್ತಾ, ಸುರೇಶ ಬಾಡಗಿ, ಸುನೀಲ ಪಾಟೀಲ, ತಬಸುಮ್ ಘೋರಿ, ಸುಮಾರ ಕಿಲಾರಿ ಹಾಗೂ ವಿದ್ಯಾರ್ಥಿಗಳು ಇದ್ದರು.
NEWS by ishwar dhavaleshwar BPN Reporter Mudalagi