---Advertisement---

Advertisement

ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ

 

 

ಮೂಡಲಗಿ ತಾಲೂಕಿನ ನಾಗನೂರ ವಲಯದ ನಾಗನೂರ ಕಾರ್ಯಕೇತ್ರದ ಅಮೋಘ ಸಿದ್ದೇಶ್ವರ ದೇವಸ್ಥಾನದಲ್ಲಿ ಗಂಗಾ ಮಾತಾ ಜ್ಞಾನ ವಿಕಾಸ ಕೇಂದ್ರದಲ್ಲಿ ಮಹಿಳಾ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಸರಕಾರಿ ಪ್ರಾಥಮಿಕ ಶಾಲೆ ಲಕ್ಷ್ಮಿ ನಗರ ನಾಗನೂರ ಹಿರಿಯ ಶಿಕ್ಷಕರಾದ ಶ್ರೀಮತಿ ಪೂರ್ಣಿಮಾ ಇವರು, ಮಹಿಳೆ ಕುಟುಂಬದ ಕಣ್ಣು ಕುಟುಂಬದ ಸಂಪೂರ್ಣ ನಿರ್ವಹಣೆ ಅವಳ ಮೇಲೆ ಇರುತ್ತದೆ ಸಮಾಜದಲ್ಲಿ ಮಹಿಳೆಗೆ ಇರುವ ಪ್ರತಿಯೊಂದು ಸೌಲಭ್ಯಗಳ ಬಗ್ಗೆ ಜ್ಞಾನ ಹೊಂದಿರಬೇಕು ಯೋಜನೆಯಿಂದ ಸಾಕಷ್ಟು ಉತ್ತಮ ಕಾರ್ಯಕ್ರಮ ಮಾಡುತ್ತಿದ್ದು ಪ್ರತಿಯೊಬ್ಬ ಮಹಿಳೆಯ ಏಳ್ಗೆಗಾಗಿ ಮಾಡುತ್ತಿದ್ದು ಅದರ ಸದುಪಯೋಗವನ್ನು ಮಾಡಿಕೊಳ್ಳಬೇಕೆಂದರು.

ನವಜೀವನ ಸಮಿತಿಯ ಅಧ್ಯಕ್ಷರಾದ ಸಿದ್ದಪ್ಪ ದಡ್ಡಿ ಇವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಕಾರ್ಯಕ್ರಮದಲ್ಲಿ ಕೇಂದ್ರದ ಅಧ್ಯಕ್ಷರು ಗಂಗವ್ವ, ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರದ್ಧಾ ಮಂಜುನಾಥ್ ಕಮ್ಮಾರ ಸೇವಾಪ್ರತಿನಿಧಿ ಮದೀನಾ ,ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಕೇಂದ್ರದ ಸದಸ್ಯರಿಗೆ ಆಟೋಟ ಆಡಿಸಿ ತಮ್ಮ ಪ್ರತಿಭೆ ಗುರುತಿಸಲು ವೇದಿಕೆ ಕಲ್ಪಿಸಿ ಕೊಡಲಾಯಿತು.

By BPN

Leave a Reply

Your email address will not be published. Required fields are marked *